ಬೆಂಗಳೂರು: ಹಿಜಾಬ್ಗಾಗಿ ಮುಸ್ಲಿಂ ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇತ್ತ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಬರುತ್ತಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ.

ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಧರಿಸಲು ಅನುಮತಿಗೆ ಕೋರಿ ಮುಸ್ಲಿಂ ಯುವತಿಯರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ, ಹಿಜಾಬ್ ವಿವಾದ ಸಂಬಂಧಿಸಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆ (ಫೆಬ್ರವರಿ 8) ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ.
ಬುಧವಾರ ಸರ್ಕಾರ ಹಾಗೂ ಮಧ್ಯಂತರ ಅರ್ಜಿದಾರರ ವಾದವನ್ನು ಹೈಕೋರ್ಟ್ ಆಲಿಸಲಿದೆ. ಈ ಮಧ್ಯೆ, ಕರ್ನಾಟಕದಲ್ಲಿ ಕಾಲೇಜುಗಳಿಗೆ 3 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.