';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪಾಣೆಮಂಗಳೂರು: ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರು- ಬಿಸಿರೋಡು ಸಮೀಪದ ಸಾಗರ್ ಆಡಿಟೋರಿಯಂ ಹಾಲ್ ಮುಂಭಾಗದಲ್ಲಿ ನಡೆದಿದೆ.
ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಮಂಗಳೂರು ಕಡೆ ಸಾಗುತ್ತಿದ್ದ ಈಚರ್ ಲಾರಿ ಮತ್ತು ಮಂಗಳೂರಿನಿಂದ ಸುಳ್ಯ ಕಡೆ ಸಾಗುತ್ತಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿಯ ಮುಂಭಾಗ ಜಖಂ ಆಗಿದ್ದು, ಲಾರಿ ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಹರಸಾಹಸಪಡಬೇಕಾಯಿತು.
ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.