dtvkannada

ಬೆಂಗಳೂರು: ಹಿಜಾಬ್ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ.
ಹಿಜಾಬ್‌ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಏಕಸದಸ್ಯ ಆದೇಶ ಹೊರಡಿಸಿದ್ದಾರೆ.
ಇಂದು ವಾದ-ಪ್ರತಿವಾದ ಆಲಿಸಿ ವಿಸ್ತೃತ ಪೀಠ ರಚನೆ ಬಗ್ಗೆ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹೈಕೋರ್ಟ್ ಏಕಸದಸ್ಯ ಪೀಠದಿಂದ ವರ್ಗಾವಣೆ ಹಿನ್ನೆಲೆ, ಶಾಂತಿಯಿಂದ ಕೋರ್ಟ್​ನಿಂದ ತೆರಳಲು ವಕೀಲರಿಗೆ ಮನವಿ ಮಾಡಲಾಗಿದೆ. ನಿಮ್ಮ ವಾದಮಂಡನೆಯಿಂದ ನಮ್ಮ ಜ್ಞಾನ ವಿಸ್ತಾರವಾಗಿದೆ ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅಭಿಪ್ರಾಯ ತಿಳಿಸಿದ್ದಾರೆ. ಹಿಜಾಬ್​​ ಪ್ರಕರಣ ಹೈಕೋರ್ಟ್ ಏಕಸದಸ್ಯ ಪೀಠದಿಂದ ವರ್ಗಾವಣೆ ಹಿನ್ನೆಲೆ, ನಾವೆಲ್ಲರೂ ನ್ಯಾಯಮೂರ್ತಿಗಳಿಗೆ ತುಂಬಾ ಆಭಾರಿಯಾಗಿದ್ದೇವೆ. ಬಹಳ ತಾಳ್ಮೆಯಿಂದ ಅರ್ಥಪೂರ್ಣ ವಿಚಾರಣೆ ನಡೆಸಿದ್ದೀರಿ. ಸೌಹಾರ್ದತೆಯಿಂದ ವಾದಮಂಡಿಸಿದ ವಕೀಲರಿಗೆ ಅಭಿನಂದನೆ. ವಕೀಲರಾದ ದೇವದತ್ ಕಾಮತ್, ಸಂಜಯ್​​ ಹೆಗ್ಡೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವಹಿಸುವ ಅಗತ್ಯವಿದೆ ಎಂದು ನ್ಯಾಯಮೂರ್ತಿ ಕೃಷ್ಣಾ ಎಸ್ ದೀಕ್ಷಿತ್ ಅಭಿಪ್ರಾಯ ಪಟ್ಟಿದ್ದರು. ನೀವು ಒಪ್ಪಿದರೇ ವಿಸ್ತೃತ ಪೀಠಕ್ಕೆ ವಹಿಸುವೆ. ನಿನ್ನೆ ವಾದ ಮಾಡಿದ ಅಂಶಗಳು, ದಾಖಲೆ ಪರಿಶೀಲಿಸಿದ್ದೇನೆ ಎಂದು ಹೇಳಿದ್ದರು. ಹಿರಿಯ ವಕೀಲ ಸಂಜಯ ಹೆಗಡೆ ವಾದ ಮಂಡನೆ ಮಾಡಿ, ವಿಸ್ತೃತ ಪೀಠಕ್ಕೆ ವಹಿಸುವುದು ಕೋರ್ಟ್ಗೆ ಬಿಟ್ಟ ವಿಚಾರ. ಆದರೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ವರ್ಷದಲ್ಲಿ 2 ತಿಂಗಳು ಮಾತ್ರ ಬಾಕಿ ಇದೆ ಎಂದು ಹೇಳಿದ್ದಾರೆ. ವಾದ ಪ್ರತಿವಾದಿಗಳ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್ಗೆ ಅರ್ಜಿದಾರರ ಪರ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದಾರೆ. ವಿಸ್ತೃತ ಪೀಠಕ್ಕೆ ವಹಿಸುವುದು ನ್ಯಾಯಮೂರ್ತಿಗಳ ವಿವೇಚನಾಧಿಕಾರ ಎಂದು ಹೇಳಿದ್ದಾರೆ.

ವಿಸ್ತೃತ ಪೀಠ ಅಂದರೆ ಎರಡು ಅಥವಾ ಮೂರು, ಐದು ಅಥವಾ ಏಳು ಪೀಠ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ತೀರ್ಮಾನಿಸಲಿದ್ದಾರೆ. ಸದ್ಯ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

ತೀರ್ಪಿಗಾಗಿ ಇಡೀ ರಾಜ್ಯವೇ ಕಾಯುತ್ತಿದ್ದ ವೇಳೆ ಬೆಂಗಳೂರು ನಗರ , ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!