';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಸಹೋದರಿಯರು ಪತ್ತೆಯಾಗಿದ್ದಾರೆ.
ಮನೆ ಬಿಟ್ಟು ಹೋಗಲು ಮೂಲ ಕಾರಣ ಮೊಬೈಲ್ ಬಳಸದಂತೆ ಬುದ್ಧಿವಾದ ಹೇಳಿದ ಕಾರಣ ಮನೆ ಬಿಟ್ಟು ಹೋಗಿದ್ದಾರೆಂದು ತಿಳಿದು ಬಂದಿದೆ.
ಈಗಗಾಲೇ ಈ ಇಬ್ಬರು ಸಹೋದರಿಯರನ್ನು ಬಜ್ಪೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ವಿವರ: ಬಜ್ಪೆ ಗ್ರಾಮದ ಕೊಂಚಾರು ನಿವಾಸಿ ಮಾಮು ಎಂಬುವರ ಇಬ್ಬರು ಪುತ್ರಿಯರಾದ ಮುಬೀನಾ (22) ಮತ್ತು ಬುಶ್ರಾ (21) ಎಂಬುವರು ನಾಪತ್ತೆಯಾಗಿದ್ದರು.
ಫೆಬ್ರವರಿ 7ರಂದು ರಾತ್ರಿ ಊಟ ಮಾಡಿ ಮಲಗಿದ್ದವರು, ಬೆಳಗ್ಗೆ ನೋಡಿದಾಗ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಇಬ್ಬರು ಯುವತಿಯರನ್ನು ನಾಪತ್ತೆಯಾದ ಎರಡು ದಿನದಲ್ಲಿ ಬಜ್ಪೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇವರನ್ನು ಹಾಸನ ಜಿಲ್ಲೆಯ ಹರಸಿಕೆರೆ ತಾಲೂಕಿನ ಜಾವಗಲ್ ಎಂಬಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆಂದು ವರದಿಯಾಗಿದೆ.