';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಬುಲೆಟ್ ಬೈಕ್ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಕುಂಬ್ರ ಸಮೀಪದ ಹಾಲಿನ ಡೈರಿ ಬಳಿ ಫೆ.14 ರ ರಾತ್ರಿ ನಡೆದಿದೆ.
ಗಾಯಗೊಂಡವರನ್ನು ಕುಂಬ್ರ ಫ್ರೆಂಡ್ಸ್ ಟೈಲರ್ ಮಾಲಕ ಬಾಲಕೃಷ್ಣ ಎಂದು ತಿಳಿದು ಬಂದಿದೆ.
ಕೆಲಸ ಮುಗಿಸಿ ಮನೆಗೆ ಹೊರಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಆಕ್ಟೀವಾ ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಸವಾರ ಅಲ್ಪ ಸ್ವಲ್ಪ ಗಾಯಗಳೊಂದಿಗಘ ಪಾರಾಗಿದ್ದಾರೆ.
ಗಾಯಾಳುವನ್ನು ಪುತ್ತೂರು ಮಹಾವೀರ ಆಸ್ಪತ್ರೆಗೆ ಸಾಗಿಸಲಾಗಿದ್ದು, ಎದೆಯ ಭಾಗ ಮತ್ತು ತಲೆಯ ಭಾಗಕ್ಕೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಈ ಸ್ಥಳದಲ್ಲಿ ಕೆಲ ದಿನಗಳಿಂದ ಅತೀ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು,ಕಳೆದ ತಿಂಗಳು ಒರ್ವ ಆಕ್ಟೀವಾ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ ಎಂದು ಸಾರ್ವಜನಿಕರು ಮಾತಾಡಿಕೊಳ್ಳುತ್ತಿದ್ದರು.