ಕಾಸರಗೋಡು: ಹಲವು ವರ್ಷಗಳಿಂದ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಬೆಳಗ್ಗೆ ಕಾಸರಗೋಡಿನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಆರ್.ಎಸ್.ಎಸ್.ಕಾರ್ಯಕರ್ತ ಅಣಂಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಎಂದು ತಿಳಿದು ಬಂದಿದೆ.
ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆಯಾಗಿದ್ದರು.
ಹುಡುಕಾಡಿದಾಗ ಮನೆ ಸಮೀಪದ ಮರ ವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆ ಯ ಸಿನಾನ್, ಸೂರ್ಲು ವಿನ ರಿಷಾದ್ ಹಾಗೂ ಕೊಲೆ ಪ್ರಕರಣದ ಆರೋಪಿಯಾದ್ದನು.
ತಳಂಗರೆಯ ಜೈನುಲ್ ಆಬಿದ್ ಕೊಲೆ ಪ್ರಕರಣದಲ್ಲೂ ಈತ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು,ಸಾವಿಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.