ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯತ್ವ ನೊಂದಣಿ ಕಾರ್ಯ ಭರದಿಂದ ನಡೆಯುತ್ತಿದ್ದು. ಇದು ಇನ್ನಷ್ಟು ವ್ಯವಸ್ಥಿತ ರೀತಿಯಲ್ಲಿ ನಡೆಯುವ ಉದ್ದೇಶದಿಂದ ರಾಜ್ಯಮಟ್ಟದ ನಾಯಕರಿಗೆ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗುತ್ತಿದೆ.

ಇದೀಗ ವಿರಾಜಪೇಟೆಗೆ ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕೆಪಿಸಿಸಿ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಕಾವು ಹೇಮನಾಥ್ ಶೆಟ್ಟಿಯವರನ್ನು ಉಸ್ತುವಾರಿಯಾಗಿ ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿಯ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಹೇಮನಾಥ ಶೆಟ್ಟಿಯವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಮಾರು 9 ವರ್ಷಗಳ ಕಾಲ ಸೇವೆ ಸಲ್ಲಿಸಿ, ಜಿಲ್ಲೆಯ, ರಾಜ್ಯದ ಹಲವು ಸ್ಥರದ ಜವಾಬ್ದಾರಿ ನಿರ್ವಹಿಸಿದ್ದರು.

ಕೇರಳದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡು, ಇತ್ತೀಚೆಗಿನ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೇರಳದ ಮೂವಾಟ್ಟುಪುಳ ವಿಧಾಸಭೆ ಮತ್ತು ಕರ್ನಾಟಕದ ಹಾನಗಲ್ ವಿಧಾನಸಭಾ ಚುನಾವಣೆಯಲ್ಲಿ ಉಸ್ತುವಾರಿ ವಹಿಸಿಕೊಂಡು ಕೆಲಸ ಮಾಡಿದ್ದರು.

ಇದೀಗ ಅವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
