ಹೈಕೋರ್ಟ್ ನ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳನ್ನು ಹೊಂದಿರುವ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಕೋರ್ಟ್ ಬಹಳ ಸ್ಪಷ್ಟವಾಗಿ ಹೇಳಿದೆ. ಈ ನಿಟ್ಟಿನಲ್ಲಿ ಆದೇಶವು ಯಾವುದೇ ಹೈಸ್ಕೂಲ್ ಗಳಿಗೆ ಅನ್ವಯಿಸುವುದಿಲ್ಲ. ಆದರೆ ಇದೇ ಆದೇಶವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯದ ಹಲವು ಹೈಸ್ಕೂಲ್ ಗಳಲ್ಲಿ ಸ್ಕಾರ್ಫ್, ಬುರ್ಕಾ ಕಳಚಲು ಬಲವಂತಪಡಿಸಿ ಮುಸ್ಲಿಮ್ ವಿದ್ಯಾರ್ಥಿನಿಯರ ಮತ್ತು ಶಿಕ್ಷಕಿಯರನ್ನು ಅವಮಾನಿಸಲಾಗುತ್ತಿದೆ ಎಂದು PFI ಆಕ್ರೊಶ ವ್ಯಕ್ತಪಡಿಸಿದೆ.
ಸರಕಾರದ ಆಣತಿಯಂತೆ ಶಾಲಾ ಶಿಕ್ಷಕಿಯರು ಮತ್ತು ಆಡಳಿತ ಮಂಡಳಿ ಸದಸ್ಯರು ಅಮಾನವೀಯ ವರ್ತನೆಯನ್ನು ತೋರುತ್ತಿದ್ದಾರೆ. ಸರಕಾರವು ಕೋರ್ಟ್ ಆದೇಶ ದುರ್ಬಳಕೆ ಮಾಡಿಕೊಂಡು ಗೊಂದಲ ಸೃಷ್ಟಿಸುವುದನ್ನು ಮತ್ತು ರಾಜಕೀಯ ಲಾಭ ಪಡೆಯುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಮುಸ್ಲಿಮ್ ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರನ್ನು ಅಮಾನವೀಯವಾಗಿ ನಡೆಸಿಕೊಂಡು ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನ್ಯಾಯಾಂಗ ನಿಂದನೆ ಮಾಡಿದ ಶಿಕ್ಷಕರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಜರಗಿಸಬೇಕು. ಮುಸ್ಲಿಮ್ ಸಮುದಾಯ ಮತ್ತು ಪ್ರಜ್ಞಾವಂತ ನಾಗರಿಕ ಸಮಾಜವು ಈ ರೀತಿಯ ದುರ್ವರ್ತನೆಗಳ ಬಗ್ಗೆ ಪ್ರಬಲವಾಗಿ ಧ್ವನಿ ಎತ್ತಬೇಕು. ಶಾಲೆಗಳಲ್ಲಿ ಇಂತಹ ಅನಾಗರಿಕ ವರ್ತನೆಗಳು ಮುಂದುವರಿದರೆ ಪಾಪ್ಯುಲರ್ ಫ್ರಂಟ್ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಯಾಸಿರ್ ಹಸನ್ ತಿಳಿಸಿದ್ದಾರೆ.