dtvkannada

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ರಮ್ಯಾ ಮೂರ್ತಿ ಎಂದು ತಿಳಿದು ಬಂದಿದೆ.
ಟಿ.ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ ಕಿರುಕುಳ ಆರೋಪ ಕೇಳಿಬಂದಿದೆ.

ಈ ಹಿಂದೆ ಶಾಲಾ ಆಡಳಿತ ಮಂಡಳಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ವಿದ್ಯಾರ್ಥಿನಿ ತಾಯಿ ದೂರು ನೀಡಿದ್ದರು. ಇದೇ ವಿಚಾರವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಸಂಬಂಧ ಬೆಂಗಳೂರು ನಗರದ ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐ ಹೆಟ್ ಯು ಪ್ರಿನ್ಸಿಪಲ್ ಎಂದು ಹೆಸರು ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ (ಫೆಬ್ರವರಿ 18) ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ರಮ್ಯಮೂರ್ತಿ ಸಾವಿಗೆ ಶರಣಾಗಿದ್ದಾಳೆ.

By dtv

Leave a Reply

Your email address will not be published. Required fields are marked *

error: Content is protected !!