';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸುರತ್ಕಲ್: ಸಮಾಜ ಸೇವಕ ಆಸೀಫ್ ಆಪತ್ಭಾಂದವರು ಕಳೆದ ಹನ್ನೆರಡು ದಿನಗಳಿಂದ ಎನ್‌ಐಟಿಕೆ ಟೋಲ್ ಗೇಟ್ ಸ್ಥಗಿತಗೊಳಿಸಬೇಕೆಂದು ಅಹೋರಾತ್ರಿ ಧರಣಿ ಕುಳಿತಿರುವ ಅಪತ್ಬಾಂಧವ ಅವರ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜಾಮೀನುರಹಿತ ಮೊಕದ್ದಮೆ ದಾಖಲಾದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರ ಬಂಧನವಾಗುವ ಸಾಧ್ಯತೆ ಇದೆಯೆಂದು ತಿಳಿದು ಬಂದಿದೆ.
ನಿನ್ನೆ ತಡರಾತ್ರಿ ಧರಣಿ ಸ್ಥಳಕ್ಕೆ ಬಂದ ಸುರತ್ಕಲ್ ಠಾಣಾ ಪೊಲೀಸರು ಮಂಗಳಮುಖಿಯರು ನೀಡಿದ ದೂರಿನ ಆಧಾರದಲ್ಲಿ ತಮ್ಮ ಮೇಲೆ ಜಾಮೀನು ರಹಿತ ಮೊಕದ್ದಮೆ ದಾಖಲಾಗಿರುತ್ತದೆ ಆದ್ದರಿಂದ ತನಿಖೆಯ ಕುರಿತು ಪೊಲೀಸ್ ಠಾಣೆಗೆ ಹಾಜರಾಗಲು ತಿಳಿಸಿದ್ದಾರೆ.
ಪೊಲೀಸರ ಜೊತೆ ಮಾತನಾಡುತ್ತಾ ಇದನ್ನು ನಿರಾಕರಿಸಿದ ಆಸಿಫ್ ಆಪದ್ಭಾಂಧವ, ನಾನು ಧರಣಿ ಸ್ಥಳವನ್ನು ಬಿಟ್ಟು ಎಲ್ಲಿಗೂ ಬರುವುದಿಲ್ಲ, ನೀವುಗಳು ಬೇಕಾದರೆ ನನ್ನನ್ನು ಅರೆಸ್ಟ್ ಮಾಡಿ ಎಂದು ಪೊಲೀಸರಿಗೆ ಉತ್ತರ ನೀಡಿದ್ದಾರೆಂದು ತಿಳಿದು ಬಂದಿದೆ.