';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಆರೆಸ್ಸೆಸ್‌ನವರಿಗೆ ತ್ರಿವರ್ಣ ಧ್ವಜದ ಮೇಲೆ ಗೌರವವಿಲ್ಲ. ಈಶ್ವರಪ್ಪನ ಮೂಲಕ ಆರೆಸ್ಸೆಸ್‌ನವರು ಎಲ್ಲವನ್ನೂ ಮಾಡಿಸುತ್ತಿದ್ದಾರೆ ಈಶ್ವರಪ್ಪ ಒಬ್ಬ ಪೆದ್ದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಈಶ್ವರಪ್ಪ ಅವರು ರಾಜಿನಾಮೆ ಪಡೆಯಬೇಕು ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಸೋಮವಾರ (ಫೆ. 21) ಪಕ್ಷದ ಕಾರ್ಯಕರ್ತರು ಹೋರಾಟ ಮಾಡುತ್ತಾರೆ. ಈಶ್ವರಪ್ಪ ಹೇಳಿಕೆ ವಿಚಾರವನ್ನು ಅಧಿವೇಶನದಲ್ಲಿ ಚರ್ಚೆಗೆ ಎತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.
ಅಧಿವೇಶನ ನಡೆಯುವವರೆಗೂ ಅಹೋರಾತ್ರಿ ಧರಣಿ ಮುಂದುವರಿಯಲಿದೆ. ಅಧಿವೇಶನ ಮುಂದೂಡಿದರೆ ನಾವು ಜನರ ಬಳಿ ಹೋಗುತ್ತೇವೆ.
ಈ ಸರ್ಕಾರದ ನಡವಳಿಕೆ ಬಗ್ಗೆ ಜನರೇ ತೀರ್ಮಾನಿಸುತ್ತಾರೆ. ಸಂವಿಧಾನಕ್ಕೆ ಗೌರವ ಕೊಡದೇ ಮಂತ್ರಿಯಾಗಿ ಹೇಗೆ ಇರುತ್ತಾರೆ’ ಎಂದು ಪ್ರಶ್ನಿಸಿದರು