';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಎಡಿಜಿಪಿ ಮುರುಗನ್ ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಸೆಕ್ಷನ್ ೧೪೪ ಜಾರಿ ಮಾಡಲಾಗಿದ್ದು, ಅಹಿತಕರ ಕೆಲವೆಡೆ ಅಹಿತಕರ ಘಟನೆಗಲು ನಡೆದಿದೆ. ಯಾರೇ ಆಗಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಕರಣದ ಆರೋಪಿತರಾಗಿ ಖಾಸಿಫ್(೩೦) ಬುದ್ಧಾನಗರ, ಶಿವಮೊಗ್ಗ ಟೌನ್ ಮತ್ತು ಸೈಯ್ಯದ್ ನಧೀಂ(೨೦) ಜೆಪಿ ನಗರ, ಶಿವಮೊಗ್ಗ ಟೌನ್ ರವರುಗಳನ್ನು ದಸ್ತಗಿರಿ ಮಾಡಿ ತನಿಖೆ ಕೈಗೊಂಡಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಸದ್ಯ ಉದ್ವಿಗ್ನ ಸ್ಥಿತಿಯಲ್ಲಿರುವ ಶಿವಮೊಗ್ಗದಲ್ಲಿ ಎರಡು ದಿನ ಕರ್ಫ್ಯೂ ಜಾರಿಮಾಡಲಾದ ಜೊತೆಗೆ ಎರಡು ದಿನಗಳ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.