ಹುಣಸೂರು: ಅಪ್ರಾಪ್ತ ವಯಸ್ಸಿನ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ.

ಇವರಿಬ್ಬರು ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಸಿಂಗರಮಾರನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿ ಅರ್ಚನಾ (17) ಹಾಗೂ ಇದೇ ಗ್ರಾಮದ ರಾಕೇಶ್ (24) ನೇಣಿಗೆ ಶರಣಾದ ಪ್ರೇಮಿಗಳು ಎಂದು ಗುರುತಿಸಲಾಗಿದೆ.
ಪ್ರೇಮಿಗಳಿಬ್ಬರು ನಿನ್ನೆ ರಾತ್ರಿ ಊರಿನ ಹೊರವಲಯದ ಜಮೀನಿನಲ್ಲಿರುವ ಹಲಸಿನಮರಕ್ಕೆ ಇಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಬಿಳಿಕೆರೆ ಠಾಣೆ ಎಸ್.ಐ. ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.