ಸೂರತ್: ರಸ್ತೆಯಲ್ಲಿ ಕಾರಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಗಡ್ಡ ಎಳೆದು ಚಿತ್ರಹಿಂಸೆ ಕೊಟ್ಟ ಘಟನೆ
ಗುಜರಾತ್ ನ ಭರೂಚ್ ಜಿಲ್ಲೆಯ ಶೇರಾ ಗ್ರಾಮದಲ್ಲಿ ನಡೆದಿದೆ.

ಮುಹಮ್ಮದ್ ಅಥಾವುಲ್ಲಾ ಎಂಬವರ ಮೇಲೆ ಸಂಘಪರಿವಾರದ ಕಾರ್ಯಕರ್ತರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.
ನಡೆದ ಘಟನೆ ಬಗ್ಗೆ ಆರೋಪಿಗಳ ವಿರುದ್ಧ ಅಥಾವುಲ್ಲಾ ಗೋಧ್ರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೆಂದು ತಿಳಿದು ಬಂದಿದೆ. ಆದರೆ ಇದೀಗ ಪೊಲೀಸರು ಅಥಾವುಲ್ಲಾ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಮೋಟಾರ್ ಸೈಕಲ್ ರಿಪೇರಿ ಅಂಗಡಿ ನಡೆಸುತ್ತಿರುವ ಅಥಾವುಲ್ಲಾ ಮನೆಗೆ ತೆರಳುತ್ತಿದ್ದಾಗ ಅವರ ಕಾರನ್ನು ತಡೆದು ಗಂಭೀರವಾಗಿ ಹಲ್ಲೆ ನಡೆಸಿ ಭಯೋತ್ಪಾದಕ ನೀನು ಎಂದು ತಲೆ ಮತ್ತು ಮುಖಕ್ಕೆ ಹೊಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಂತರದ ಬೆಳವಣಿಗೆಯಲ್ಲಿ ಪೊಲೀಸರು ಎರಡೂ ಕಡೆಯವರ ಮೇಲೂ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.