dtvkannada

ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವ ಗಾಯಗೊಂಡ ದಾರುಣ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ನೆಕ್ಕಿಲಾಡಿ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬೆದ್ರೊಡಿ ನಿವಾಸಿ ನವಾಝ್ (34) ಎಂದು ತಿಳಿದು ಬಂದಿದೆ.

ಇನ್ನೊರ್ವ ರಶೀದ್ ಎಂಬವರು ಗಾಯಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲಸ ಬಿಟ್ಟು ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.
ಮೃತ ವ್ಯಕ್ತಿ 4 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ

By dtv

Leave a Reply

Your email address will not be published. Required fields are marked *

error: Content is protected !!