ಬೆಂಗಳೂರು: ಖ್ಯಾತ ನಟಿ ಅಮೂಲ್ಯ ರವರು ಇಂದು ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು ಅವರ ಕುಟುಂಬ ಮತ್ತು ಅಭಿಮಾನಿ ಬಳಗದಲ್ಲಿ ಬಾರಿ ಸಂತೋಷ ಮನೆ ಮಾಡಿದೆ.
ಬೆಂಗಳೂರಿನ ಜಯನಗರದ ಕ್ಲೌನ್ ಡೈನ್ ಆಸ್ಪತ್ರೆಯಲ್ಲಿ ಅಮೂಲ್ಯರವರಿಗೆ ಹೆರಿಗೆಯಾಗಿದ್ದು ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಇನ್ನು ತಾಯಿ ಮತ್ತು ಮಕ್ಕಳು ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯರವರ ಪತಿ ಜಗದೀಶ್ ರವರು ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಚಿತ್ರರಂಗದಲ್ಲಿ ಬೇಡಿಕೆ ಇರುವ ನಟಿಯಾಗಿ ಗುರುತಿಸಿಕೊಂಡಿದ್ದ ಅಮೂಲ್ಯ, 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್ ಮೂಲಕ ಅಮೂಲ್ಯ ಕೆಲ ಸಮಯದ ಹಿಂದೆ ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.