ಪುತ್ತೂರು: ಕಳೆದ ೧೬ ವರ್ಷಗಳಹಿಂದೆ ಅಂದರೆ 2006ರಲ್ಲಿ ನಡೆದ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನಿನ್ನೆ ಇಬ್ಬರು ಕಳ್ಳರ ಪೈಕಿ ಒಬ್ಬರಿಗೆ ಶಿಕ್ಷೆಯನ್ನು ಪ್ರಕಟಿಸಿದೆ.
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಎಂಬಲ್ಲಿ ಕಳ್ಳರಿಬ್ಬರು ಮನೆಯ ಬಾಗಿಲಿನ ಬೀಗದ ಕೊಂಡಿಯನ್ನು ತುಂಡರಿಸಿ ತೆಗೆದು ಒಳ ಪ್ರವೇಶಿಸಿ ಸೂಟ್‌ಕೇಸ್‌ನಲ್ಲಿದ್ದ ಸುಮಾರು 43,000 ರೂಪಾಯಿ ಬೆಲೆಬಾಳುವ 50.930 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ 2006ರ ಮಾರ್ಚ್‌ನಲ್ಲಿ ನಡೆದಿತ್ತು.
ಮೊಟ್ಟೆತಡ್ಕ ನಿವಾಸಿ ಸುಂದರ ನಾಯ್ಕ ಎಂಬವರ ಮನೆಗೆ ನುಗ್ಗಿದ ಕಳ್ಳರು ಬೆಲೆಬಾಳುವ ಬಂಗಾರವನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಅಪರಾಧ ಪತ್ತೆ ದಳದ ನಿರೀಕ್ಷಕರಾದ ತಿಲಕ್ ಚಂದ್ರರವರು ಸೊತ್ತು ಹಾಗೂ ಆರೋಪಿಗಳನ್ನು ದಸ್ತಗಿರಿ ಮಾಡಿ ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಿದ್ದರು.
ಅದೇ ರೀತಿ ಆಗಿನ ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಉಪನಿರೀಕ್ಷಕ ಕೃಷ್ಣ ನಾಯ್ಕ್‌ರವರು ಆರೋಪಿಗಳ ಮೇಲೆ ದೋಷರೋಪಣಾಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇದರ ಪ್ರಕಾರದಂತೆ ನ್ಯಾಯಲಯವು ಸದ್ರಿ ಪ್ರಕರಣಕ್ಕೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 5,000 ರೂ ಗಳ ದಂಡವನ್ನು ವಿಧಿಸಿದೆ.
ತಪ್ಪಿದ್ದಲ್ಲಿ 6 ತಿಂಗಳ ಹೆಚ್ಚುವರಿ ಶಿಕ್ಷೆಯನ್ನು ಪ್ರಕಟಿಸಿದೆ. ಆರೋಪಿಯು ಪ್ರಸ್ತುತ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆಂದು ತಿಳಿದು ಬಂದಿದೆ.