ಕುಂದಾಪುರ: ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಪ್ರೀತಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅದೇ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಲ್ವಾಡಿಯಲ್ಲಿ ಸಂಭವಿಸಿದೆ.
ವಂಡ್ಸೆಯ ನಿವಾಸಿ ರಿಜ್ವಾನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕಳೆದ 3 ವರ್ಷಗಳಿಂದ ಗಂಗೊಳ್ಳಿ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದು, ಆದರೆ ಆಕೆ ಇತ್ತೀಚೆಗೆ ಪ್ರೀತಿಯನ್ನು ತಿರಸ್ಕರಿಸಿದ್ದು, ಇದರಿಂದ ಮಾನಸಿಕವಾಗಿ ಕುಗ್ಗಿ ಹೋದ ರಿಜ್ವಾನ್ ಮಾ. 2ರಂದು ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಗ ಮನೆಯವರೆಲ್ಲ ಸಮಾಧಾನಪಡಿಸಿದ್ದರು.
ಬಳಿಕ ಆತ ಉದ್ಯೋಗ ಮಾಡುತ್ತಿದ್ದ ಸಂಸ್ಥೆಯ ಮಾಲಕ ಇರ್ಫಾನ್ ಅವರು ರಿಜ್ವಾನ್ ಅವರನ್ನು ಕೆಲಸಕ್ಕೆ ಕರೆದುಕೊಂಡು ಹೋಗಿದ್ದರು. ಅಂದು ರಾತ್ರಿ ಆತ ಬಾಡಿಗೆ ಮನೆಯಲ್ಲಿ ಮಲಗಿದ್ದು, ಮಾ. 3ರ ಬೆಳಗ್ಗೆ 7.45ರ ಸುಮಾರಿಗೆ ನೋಡಿದಾಗ ರಿಜ್ವಾನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.