dtvkannada

'; } else { echo "Sorry! You are Blocked from seeing the Ads"; } ?>

ಹಾಸನ: ಅನುಮಾನ ಎಂಬುವುದು ಜೀವನವನ್ನು ಹೇಗೆ ನರಕ ಮಾಡುತ್ತೆ ಎಂಬುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ. ಪ್ರೀತಿಸಿ ಮದುವೆಯಾದವಳಿಗೆ ಪತಿಯೇ ಸೀಮೆ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ನಡೆದಿದೆ.

ಮಹಿಳೆಯ ದೇಹ ಬಹುತೇಕ ಸುಟ್ಟು ಹೋಗಿದ್ದು ಮಹಿಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಗ್ರಾಮದ ಸತೀಶ್ ಎಂಬಾತ ಪತ್ನಿ ಭವ್ಯ(23) ಮೇಲೆ ಅಮಾನವೀಯವಾಗಿ ದಾಳಿ ನಡೆಸಿದ್ದಾನೆ. ಪ್ರೀತಿಸಿ ಮದುವೆಯಾಗಿದ್ದ ಮಡದಿ ಮೇಲಿನ ಅನುಮಾನದಿಂದ ಆಕೆ ಮಲಗಿದ್ದ ವೇಳೆ ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ.

'; } else { echo "Sorry! You are Blocked from seeing the Ads"; } ?>

ಮಹಿಳೆ ದೇಹ ಶೇಕಡಾ 70 ರಷ್ಟು ಸುಟ್ಟು ಹೋಗಿದೆ. ಐದು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಸತೀಶ್ ಮತ್ತು ಭವ್ಯ ಇಬ್ಬರೂ ಮದುವೆಯಾಗಿದ್ದರು. ಮದುವೆಯಾದ ಕೆಲವೇ ವರ್ಷದಲ್ಲಿ ಪತ್ನಿ ಮೇಲೆ ಪತಿಗೆ ಅನುಮಾನ ಹುಟ್ಟುಕೊಂಡಿದೆ. ಇದೇ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿ ಮಾರ್ಚ್ 5 ರ ಶನಿವಾರ ಪತ್ನಿ ಹತ್ಯೆಗೆ ಸತೀಶ್ ಸಂಚು ರೂಪಿಸಿದ್ದಾನೆ.

ಪತ್ನಿ ಮಲಗಿದ್ದಾಗ ಬೆಂಕಿ ಹಚ್ಚಿ ಕೊಲೆ ಮಾಡಲು ಮುಂದಾಗಿದ್ದಾನೆ. ಅದೃಷ್ಟವಶಾತ್ ಆಕೆ ಉಸಿರಾಡುತ್ತಿದ್ದು ಆಕೆ ಬದುಕುಳಿದಾಗ ಗ್ಯಾಸ್ ಲೀಕ್ ಆಗಿ ಬೆಂಕಿ ಬಿದ್ದಿದ್ದಾಗಿ ಹೇಳಿಕೆ ನೀಡುವಂತೆ ಪತ್ನಿಯನ್ನು ಬೆದರಿಸಿ ಹೇಳಿಕೆ ಕೊಡಿಸಿದ್ದಾನೆ.

'; } else { echo "Sorry! You are Blocked from seeing the Ads"; } ?>

ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಬಗ್ಗೆ ಭವ್ಯ ಹೇಳಿಕೆ ನೀಡಿದ್ದರು. ಆದ್ರೆ ಘಟನೆ ಬಗ್ಗೆ ಅನುಮಾನದಿಂದ ತನಿಖೆ ನಡೆಸಿದಾಗ ಪೊಲೀಸರಿಗೆ ಘಟನೆ ಹಿಂದಿನ ಮರ್ಮದ ಸತ್ಯ ತಿಳಿದಿದೆ. ಅನುಮಾನದ ಪತಿಯ ರಹಸ್ಯ ಬಯಲಾಗಿದೆ. ಸದ್ಯ ಆರೋಪಿ ಪತಿ ಸತೀಶ್ನನ್ನ ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!