';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಾಣಿ, ಮಾ.07: ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಬುಡೋಳಿ ಖಾಸಗೀ ಶಾಲೆಯಲ್ಲಿ 6 ನೇ ತರಗತಿಯಲ್ಲಿ ಓದುತ್ತಿರುವ ಅದ್ವೀತ್(12) ಗಾಯಗೊಂಡ ವಿದ್ಯಾರ್ಥಿ. ಮಗನನ್ನು ಶಾಲೆಯಿಂದ ಮನೆಗೆ ತನ್ನ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಬೈಕ್ ಸವಾರ ದಿನೇಶ್ ಅಲ್ಪಸಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಗಾಯಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.