dtvkannada

ಚೆನ್ನೈ: ಇಂದು ನಸುಕಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್ ಆರ್ ಇಳಂಗೋವ ಅವರ ಪುತ್ರ ರಾಕೇಶ್ ಇಳಂಗೋವ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಕೇಶ್ ಮತ್ತು ಆತನ ಸ್ನೇಹಿತ ಪುದುಚೇರಿಗೆ ತೆರಳುವಾಗ ನಸುಕಿನ ಜಾವ 3.45ರ ಸುಮಾರಿಗೆ ಕೊಟ್ಟಕುಪ್ಪಂ ಬಳಿ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಳಿಕ ಸ್ಥಳೀಯರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಒಳಗಡೆ ಸಿಕ್ಕಿಕೊಂಡಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಕೇಶ್ ಸ್ನೇಹಿತನನ್ನು ಪಾಂಡಿಚೇರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆದಿದೆಯೆಂದು ವರದಿಯಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!