ಕಡಬ: ಕಡಬದ ಇಂಜಿನಿಯರ್ ಒರ್ವ ಮಂಗಳೂರು ಹೊರವಲಯದ ಮುಲ್ಕಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಸವಾರನನ್ನು ಕಡಬ ತಾಲೂಕು ಎಡಮಂಗಲ ಗ್ರಾಮದ ಸಚಿನ್ (28) ಎಂದು ಗುರುತಿಸಲಾಗಿದೆ.
ಮಾ.09ರಂದು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡರ್‌ಗೆ ಬೆಳ್ಳಂ ಬೆಳಗ್ಗೆ 3:30 ಗಂಟೆಗೆ ಪಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದಾಗ ಬಪ್ಪನಾಡು ಬಳಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಳಿಕ ಅವರ ತಲೆ ಹೆದ್ದಾರಿ ಡಿವೈಡರ್‌ಗೆ ಅಪ್ಪಳಿಸಿದೆ ಎನ್ನಲಾಗಿದೆ.
ಅಪಘಾತದಿಂದ ಗಂಭೀರ ಗಾಯಗೊಂಡ ಸಚಿನ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಇವರು ಮಂಗಳೂರಿನಲ್ಲಿ ಸಿವಿಲ್ ಇಂಜಿನಿಯರ್ ಆಗಿ ವೃತ್ತಿ ನಿರ್ವಹಿಸುತ್ತಿದ್ದರೆಂದು ತಿಳಿದು ಬಂದಿದೆ.