ಬೆಂಗಳೂರು: ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದ್ದ ಹಿಜಾಬ್ ವಿವಾದ ಅಂತಿಮ ಘಟ್ಟ ತಲುಪಿದ್ದು, ನಾಳೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ತೀರ್ಪು ನೀಡಲಿದೆ. ಸಮವಸ್ತ್ರದ ಜತೆ ಹಿಜಾಬ್’ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್’ರವರ ಪೂರ್ಣ ಪೀಠ ತೀರ್ಪು ನೀಡಲಿದೆ.
ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಬಳಿಕ ಕರ್ನಾಟಕದಾದ್ಯಂತ ಹಬ್ಬಿ ಇದೀಗ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸದ್ದು ಮಾಡಿದೆ. ಹಿಜಾಬ್ ವಿವಾದ ಹಿನ್ನೆಲೆ ಹೈಕೋರ್ಟ್ನಲ್ಲಿ 11 ದಿನಗಳ ಕಾಲ ಚರ್ಚೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು. ಸದ್ಯ ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ.
