ಚಿತ್ರದುರ್ಗ: ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ.
ಮೃತರಲ್ಲಿ ಬೆಂಗಳೂರು ಮೂಲದ ಶ್ವೇತಾ (24 ವ) ಗುರುತು ಪತ್ತೆಯಾಗಿದೆ. ಮತ್ತೊಬ್ಬ ವ್ಯಕ್ತಿ ಟೆಂಪೊ ಟ್ರಾವೆಲರ್ ಕ್ಲೀನರ್ ಮೃತನಾಗಿದ್ದು, ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪದ ಶಾಹಿ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಳಿ ಸೋಮವಾರ ಬೆಳಗಿನ ಜಾವ ಘಟನೆ ನಡೆದಿದೆ.
ಟೆಂಪೋ ಟ್ರಾವೆಲರ್ ಗೋಕರ್ಣದಿಂದ ಬೆಂಗಳೂರು ಕಡೆ ಹೋಗುವಾಗ ಈ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಶ್ವೇತಾ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.