dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು/ಉಡುಪಿ: ನಾಳೆ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಾವು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುತ್ತಿದ್ದೇವೆ. ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ವರು ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ತಿಳಿಸಿದ್ದಾರೆ. ಉಭಯ ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಶಿವಮೊಗ್ಗ ಸೇರಿ ರಾಜ್ಯದ ಇತರ ಸೂಕ್ಷ್ಮ ಜಿಲ್ಲೆಗಳಲ್ಲೂ ರಜೆ ನೀಡುವ ಸಾಧ್ಯತೆಗಳಿದ್ದು, ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶ ಹೊರಬರಬೇಕಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!