';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಲಿರುವ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಹೈಕೋರ್ಟ್‌ನಲ್ಲಿ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ನಗರದಲ್ಲಿ ಸೆಕ್ಷನ್ 144ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದರು.
1,200 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.