';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಹೈಕೋರ್ಟ್ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
ಹಿಜಾಬ್ ನಿಷೇಧ ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರ ನೇತೃತ್ವದ ಪೀಠವು ಈ ತೀರ್ಪು ನೀಡಿದೆ.
ಫೆಬ್ರವರಿ 10ರಿಂದ ಫೆಬ್ರವರಿ 25ರ ನಡುವೆ 11 ದಿನ ಕಾಲ ಪ್ರತಿದಿನ ಸರಾಸರಿ ಎರಡು ತಾಸಿನಂತೆ ಒಟ್ಟಾರೆ 23.5 ತಾಸು ವಿಚಾರಣೆ ನಡೆಸಿತ್ತು.