ಉಳ್ಳಾಲ: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮಂಗಳೂರಿನ ಕಂಕನಾಡಿ ಬೈಪಾಸ್ ನ ಕುದ್ಕೋರಿಗುಡ್ಡೆ ನಿವಾಸಿ 19 ವರ್ಷದ ದೀಕ್ಷಿತ್ ಆತ್ಮಹತ್ಯೆಗೆ ಶರಣಾದ ಯುವಕ. ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭ ಸೀಲಿಂಗ್ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ನಿನ್ನೆಯೂ ಸಂಜೆವರೆಗೆ ಕರ್ತವ್ಯ ನಿರ್ವಹಿಸಿದ್ದರು. ಸಂಬಂಧಿಕರ ಮನೆಯಲ್ಲಿದ್ದ ಯುವಕ ಬಳಿಕ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.
ಘಟನೆಗೆ ಪ್ರೇಮವೈಫಲ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.