ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನ್ಯಧರ್ಮದ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಎಚ್ಚರಿಕೆ ನೀಡಿ, ಬೆದರಿಕೆಯೊಡ್ಡಿದ ಘಟನೆ ಮಾ.೧೫ ರಂದು ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ.
ದರ್ಬೆಯ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ವಿದ್ಯಾರ್ಥಿನಿಯರು ತರಗತಿ ರಜಾ ಇದ್ದ ಕಾರಣ ಬಸ್ ನಿಲ್ದಾನದ ಬಳಿ ಹೋಟೆಲಿಗೆ ಹೋಗಿದ್ದರು. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಯುವಕರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಬೆದರಿಸಿ, ಬಲತ್ಕಾರವಾಗಿ ತಮ್ಮ ಸಂಘಟನೆಯ ಕಚೇರಿಗೆ ಕರೆದೊಯ್ದು ಅಲ್ಲಿ ಎಚ್ಚರಿಕೆ ನೀಡಿ ಅವರು ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿಲಾಗಿದೆ ಎಂದು ತಿಳಿದು ಬಂದಿದೆ.
ಈ ವೇಳೆ ಸಂಘಪರಿವಾರದ ಯುವಕರಿಂದ ಹಲ್ಲೆ ನಡೆದಿರುವುದಾಗಿಯೂ, ಪೊಲೀಸರಿಗೆ ದೂರು ನೀಡಿದರೆ ವೀಡಿಯೋ ವೈರಲ್ ಮಾಡುವುದಾಗಿಯೂ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ಪೊಲೀಸರು ಈ ಬಗ್ಗೆ ಕೂಲಂಕುಶ ತನಿಕೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹವೂ ವ್ಯಕ್ತವಾಗಿದೆ.