ಬೆಂಗಳೂರು: ಹಿಜಾಬ್ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಮುಸ್ಲಿಂ ಸಂಘಟನೆ ನೀಡಿರುವ ಮಾರ್ಚ್ 17ರ ಕರ್ನಾಟಕ ಬಂದ್‌ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆ ಬೆಂಬಲ ಘೋಷಿಸಿದೆ.

ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ವಿರೋದಿಸಿ ಮುಸ್ಲಿಂ ಉಲಾಮ ಸಂಘಟನೆ ನಾಳೆ ಕರ್ನಾಟಕ ಬಂದ್‌ಗೆ ಕರೆನೀಡಿತ್ತು. ಈ ಬಂದ್‌ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ನೀಡುವುದಾಗಿ ರಾಜ್ಯಾದ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಜೊತೆಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯೂ ಬಂದ್‌ಗೆ ಬೆಂಬಲ ನೀಡಲಿದೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಮುಸ್ಲಿಮ್ ಧಾರ್ಮಿಕ ಪರಮೊಚ್ಚ ನೇತಾರ ಅಮೀರೇ ಶರಿಯತ್ ಮೌಲಾನ ಸಗೀರ್ ಅಹಮದ್ ರಶಾದಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದು, ಈ ಕರೆಗೆ ಬೆಂಬಲ ನೀಡುವುದಾಗಿ SDPI ರಾಜ್ಯಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಟ್ವೀಟ್ ಮಾಡಿ ತಿಳಿಸಿದ್ದಾರೆ.