dtvkannada

ಉಡುಪಿ: ಕಾರ್ಕಳ ಉತ್ಸವದಲ್ಲಿ ನಡೆದ ಯಕ್ಷಗಾನದ ತುಣುಕೊಂದು ಸದ್ಯ ವೈರಲ್‌ ಆಗುತ್ತಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿದೆ.

ಈ ಯಕ್ಷಗಾನ ತುಣುಕಿನಲ್ಲಿ ಕೆಲದಿನಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ವಿವಾದವೆಬ್ಬಿಸಿದ ಹಿಜಾಬ್‌ ಬಗ್ಗೆ ಹೈಕೋರ್ಟ್ ತೀರ್ಪು ನೀಡಿದೆ. ಇದೇ ವಿಚಾರವನ್ನು ತೆಂಕುತಿಟ್ಟು ಯಕ್ಷಗಾನದ ಪ್ರಸಂಗವೊಂದರಲ್ಲಿ ಒಂದು ಸಮುದಾಯಕ್ಕೆ ಅವಮಾನಿಸುವ ರೀತಿಯಲ್ಲಿ ಪ್ರಸ್ತಾಪಿಸಲಾಗಿದೆ.

ಯಕ್ಷಗಾನ ಕಲಾವಿದನೊಬ್ಬ ಈ ಬಗ್ಗೆ ವಿಶ್ಲೇಷಣೆ ಮಾಡಿದ್ದು, ವಿದ್ಯಾರ್ಥಿನಿಯರನ್ನು ಸೈನಿಕರಿಗೆ ಹೋಲಿಸಿ, ಹಿಜಾಬ್‌ನ್ನು ಕಪ್ಪು ಬಟ್ಟೆಗೆ ಹೋಲಿಸಿ ಹಾಸ್ಯ ಮಾಡಿದ್ದಾರೆ.
ಪ್ರದರ್ಶನ ನೋಡುತ್ತಿದ್ದ ಯಕ್ಷಗಾನ ಪ್ರೇಕ್ಷಕರಿಂದ ಈ ಹಾಸ್ಯಕ್ಕೆ ಚಪ್ಪಾಳೆ, ಸಿಳ್ಳೆಯ ಮೂಲಕ ಸ್ಪಂದನೆಯೂ ಸಿಕ್ಕಿದೆ.

ಒಟ್ಟಾರೆ ಈ ವಿಡಿಯೋ ತುಣುಕು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!