dtvkannada

'; } else { echo "Sorry! You are Blocked from seeing the Ads"; } ?>

ತುಮಕೂರು: ಖಾಸಗಿ ಬಸ್ ಪಲ್ಟಿ ದುರಂತದಲ್ಲಿ ಮೃತರ ಸಂಖ್ಯೆ 6 ಕ್ಕೆ ಏರಿಕೆ ಆಗಿದೆ. 40 ಕ್ಕೂ ಹೆಚ್ಚು ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 7 ಗಾಯಾಳುಗಳಿಗೆ ವಿಕ್ಟೋರಿಯಾ, ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ದುರಂತ ಸಂಭವಿಸಿದ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದರು, ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಒಬ್ಬರು ಮೃತಪಟ್ಟಿದ್ದರು. ಚಿಕಿತ್ಸೆ ಫಲಿಸದೆ ರಾತ್ರಿ ವಿಕ್ಟೋರಿಯಾದಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.

ಅಜಿತ್, ಕಲ್ಯಾಣ್, ಶಾನವಾಜ್, ಬಾಬು ವಲಿ ಹಾಗೂ ಒಂದೇ ಕುಟುಂಬದ ಅಮೂಲ್ಯ, ಹರ್ಷಿತಾ ಸಾವನ್ನಪ್ಪಿದ್ದಾರೆ. ಒಂದೇ ಮನೆಯ ಇಬ್ಬರು ಸಾವನ್ನಪ್ಪಿರುವುದು ಕುಟುಂಬಸ್ಥರನ್ನು ಕಂಗಾಲು ಮಾಡಿದೆ. ಅಪಘಾತದಲ್ಲಿ ಅಕ್ಕ- ತಂಗಿ ಇಬ್ಬರ ಸಾವು ಸಂಭವಿಸಿದೆ.

'; } else { echo "Sorry! You are Blocked from seeing the Ads"; } ?>

ಶನಿವಾರ ಅಪಘಾತ ನಡೆದ ಸ್ಥಳದಲ್ಲೇ ತಂಗಿ ಅಮೂಲ್ಯ ಸಾವನಪ್ಪಿದ್ದರು. ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಅಕ್ಕ ಹರ್ಷಿತಾ ಕೂಡ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಿಯುಸಿ ಓದುತ್ತಿದ್ದ ಅಮೂಲ್ಯ ಹಾಗೂ ಪದವಿ ಓದುತ್ತಿದ್ದ ಹರ್ಷಿತಾ ಅಪಘಾತಕ್ಕೆ ಬಲಿಯಾಗಿದ್ದಾರೆ. ಇಬ್ಬರೂ ಕಾಲೇಜಿಗೆ ಹೋಗಲು ಬಸ್​ನಲ್ಲಿ ಬರುತ್ತಿದ್ದರು ಎಂದು ತಿಳಿದುಬಂದಿದೆ. ಮೃತರ ಅಂತ್ಯಕ್ರಿಯೆ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಪೋತಗಾನಹಳ್ಳಿಯಲ್ಲಿ ಇಂದು ನರೆವೇರಲಿದೆ.

ಚಾಲಕ ಅರೆಸ್ಟ್: ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ರಘು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಹೆಸರು ಬಳಸದೆ ಬಸ್ ನಂಬರ್ ಉಲ್ಲೇಖಿಸಿ FIR ದಾಖಲು ಮಾಡಲಾಗಿದೆ. KA06 C8933 SVT ಬಸ್ ಚಾಲಕ A1 ಎಂದು ಉಲ್ಲೇಖ ಮಾಡಿ ಪ್ರಕರಣ ದಾಖಲು ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!