ಉಡುಪಿ: ಇಂದು ಬೆಳಗ್ಗೆ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3ಕ್ಕೇರಿದೆ.
ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ.
ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅಂಗಡಿಯಲ್ಲಿದ್ದ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾದರೂ, ಓರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.