dtvkannada

ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ. ನಾಲ್ಕೂವರೆ ತಿಂಗಳ ಬಳಿಕ ತೈಲ ಬೆಲೆ ಏರಿಕೆ ಆಗಿದೆ. ಅದರಂತೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 96.21 ರೂಪಾಯಿ, ಡೀಸೆಲ್ ಲೀಟರ್ಗೆ 87.47 ರೂಪಾಯಿ, ಚೆನ್ನೈನಲ್ಲಿ ಪೆಟ್ರೋಲ್ ಲೀಟರ್ಗೆ 102.16 ರೂಪಾಯಿ, ಡೀಸೆಲ್ ಲೀಟರ್ಗೆ 92.19 ರೂಪಾಯಿ, ಮುಂಬೈನಲ್ಲಿ ಲೀಟರ್ಗೆ ಪೆಟ್ರೋಲ್ ಬೆಲೆ 110.82 ರೂಪಾಯಿ ಲೀಟರ್ ಡೀಸೆಲ್ ಬೆಲೆ 95.00 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.51 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.62 ರೂಪಾಯಿ ಆಗಿದೆ. ಮಾರ್ಚ್ 10 ರಿಂದಲೇ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ.

ಕಳೆದ ವರ್ಷದ ಅಕ್ಟೋಬರ್ ಆರಂಭದ ನಂತರ ಮೊದಲ ಬಾರಿಗೆ ಗೃಹ ಅಡುಗೆ ಅನಿಲ (ಎಲ್‌ಪಿಜಿ) ಬೆಲೆಯನ್ನು ಮಂಗಳವಾರ ಪ್ರತಿ ಸಿಲಿಂಡರ್‌ ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಕಳೆದ ಬಾರಿ ಅಕ್ಟೋಬರ್ 6 ರಂದು ಎಲ್‌ಪಿಜಿ ಸಿಲಿಂಡರ್‌ ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಸರ್ಕಾರಿ ತೈಲ ಕಂಪನಿಗಳು ಮಂಗಳವಾರ ಎಲ್‌ಪಿಜಿ ಸಿಲಿಂಡರ್‌ಗಳ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 50 ರೂಪಾಯಿ ಏರಿಕೆಯಾಗಿದೆ.

ಮಾರ್ಚ್ 22ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯು ಲಕ್ನೋದಲ್ಲಿ ರೂ 938 ರಿಂದ ರೂ 987.5 ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 14 ಕೆಜಿ ಗ್ಯಾಸ್ ಸಿಲಿಂಡರ್ 949.5 ರೂಪಾಯಿಗೆ ಏರಿಕೆ ಆಗಿದೆ. ಈ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 899.50 ರೂ ಆಗಿತ್ತು.
ದೆಹಲಿ ಹೊರತುಪಡಿಸಿ, ಇತರ ಮೆಟ್ರೋ ನಗರಗಳಲ್ಲಿ ಎಲ್‌ಪಿಜಿ ಬೆಲೆಗಳು ಬದಲಾಗಿವೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 926 ರಿಂದ 976 ರೂಪಾಯಿಗೆ ಏರಿಕೆಯಾಗಿದೆ. ಲಕ್ನೋದಲ್ಲಿ ಈಗ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ 987.5 ರೂ.ಗೆ ಏರಿಕೆ ಕಂಡಿದೆ.

ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಮಾತ್ರವಲ್ಲದೆ 5 ಕೆಜಿ ಮತ್ತು 10 ಕೆಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. 5 ಕೆಜಿ ಎಲ್‌ಪಿಜಿ ಸಿಲಿಂಡರ್ 349 ರೂ.ಗೆ ಮತ್ತು 10 ಕೆಜಿ 669 ರೂ.ಗೆ ಏರಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ 2,003.50 ರೂ.ಗೆ ತಲುಪಿದೆ.

ಇದಲ್ಲದೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲಿ 80 ಪೈಸೆ ಏರಿಕೆಯಾಗಿದೆ. ಮಂಗಳವಾರ, ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 96.21 ಇದ್ದರೆ ಡೀಸೆಲ್ ದರವು ಲೀಟರ್‌ಗೆ 87.47 ರೂ. ಆಗಿದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ 110.82 ರೂ, ಚೆನ್ನೈನಲ್ಲಿ 102.16 ರೂ ಇದೆ.

ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ ಬೆಲೆಗಳಿಂದ ಜನತೆಗೆ ಪರಿಹಾರ ನೀಡಲು ಕೇಂದ್ರವು ನವೆಂಬರ್ 4 ರಂದು ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಸುಂಕವನ್ನು 5 ರೂ. ಮತ್ತು ಡೀಸೆಲ್‌ಗೆ 10 ರೂ. ರಷ್ಟು ಕಡಿತಗೊಳಿಸಿದ್ದು, ಇಂಧನ ಬೆಲೆಯಲ್ಲಿ ಗಣನೀಯ ಇಳಿಕೆಗೆ ಕಾರಣವಾಯಿತು.

By dtv

Leave a Reply

Your email address will not be published. Required fields are marked *

error: Content is protected !!