dtvkannada

ಮಂಗಳೂರು: ಕರಾವಳಿಯಲ್ಲಿ ಜಾತ್ರೆಗಳಲ್ಲಿ ಹಿಂದೂಯೇತರರ ಸಮುಯದಾಯಕ್ಕೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡದಿರುವುದರ ಬಗ್ಗೆ ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಇಂತಹ ಬೆಳವಣಿಗೆ ಖಂಡಿತಾ ದುರಾದೃಷ್ಟಕರ. ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಮಾಹಿತಿ ತರಿಸಿ ಪ್ರತಿಕ್ರಿಯೆ ನೀಡುತ್ತೇನೆ. ಈ ಬಗ್ಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳೀಯ ಎಸ್‌ಪಿಗಳಿಗೆ ಮಾಹಿತಿ ನೀಡಿದ್ದೇನೆ.

ಹಿಜಾಬ್‌ ತೀರ್ಪು ಬಂದ ತಕ್ಷಣ ಕೋರ್ಟ್‌ ತೀರ್ಪಿನ ವಿರುದ್ಧ ಅಂಗಡಿ ಬಂದ್‌ ಮಾಡಿ ಒಂದು ಕೋಮಿನವರು ಪ್ರತಿಭಟನೆ ಮಾಡಿದರು. ಅದರ ಮುಂದುವರಿದ ಭಾಗವಾಗಿ ಇದು ನಡೆಯುತ್ತಿದೆ. ಇದು ಖಂಡಿತಾ ದುರಾದೃಷ್ಟಕರ. ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಯಾವುದೇ ಶಾಂತಿಗೆ ಭಂಗ ಬಾರದಂತೆ ವ್ಯವಸ್ಥೆ ಮಾಡಿಕೊಳ್ಳುತ್ತೇವೆ.

ಸಿದ್ದರಾಮಯ್ಯ ಪ್ರತಿಕ್ರಿಯೆ:
ಹಿಂದೂ ಧಾರ್ಮಿಕ ಸಮಾರಂಭಗಳಲ್ಲಿ ಮುಸ್ಲಿಂ ವರ್ತಕರ ಅಂಗಡಿ-ಮುಂಗಟ್ಟುಗಳಿಗೆ ಅವಕಾಶ ನೀಡದಿರಲು ಕೆಲವು ಹಿಂದೂ ಸಂಘಟನೆಗಳು ಒತ್ತಡ ಹೇರುತ್ತಿರುವುದು ಕಳವಳಕಾರಿ ಬೆಳವಣಿಗೆ. ಇಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗಿರುವ ಜಿಲ್ಲಾಡಳಿತ ಮೌನವಾಗಿದ್ದು ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ.

ಸಂವಿಧಾನದ ಆಶಯಗಳನ್ನು ಪಾಲಿಸುವುದು ಪ್ರತಿಯೊಂದು ಸರ್ಕಾರದ ಮೂಲ ಕರ್ತವ್ಯ. ರಾಜ್ಯದಲ್ಲಿ ಸಂವಿಧಾನಕ್ಕೆ ಸವಾಲು ಹಾಕುತ್ತಿರುವ ಸಂವಿಧಾನೇತರ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲಾಗದ ರಾಜ್ಯ ಸರ್ಕಾರ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ ಎಂದು ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ವ್ಯಾಪಾರಕ್ಕೆ ಅವಕಾಶ ಕೊಡಬೇಕು: ಡಿಕೆಶಿ
ಕಲಬುರ್ಗಿ: ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದು ಸರಿಯಲ್ಲ. ಎಲ್ಲಕಡೆ ಎಲ್ಲರಿಗೂ ವ್ಯಾಪಾರಕ್ಕೆ ಅವಕಾಶ ನೀಡಬೇಕು. ಚರ್ಚ್, ಮಸೀದಿ ಮುಂದೆ ಹಿಂದುಗಳಿಗೆ ಅವಕಾಶ ನೀಡದೇ ಹೋದ್ರೆ ಏನಾಗುತ್ತೆ? ಅನೇಕರು ಅನೇಕ ರೀತಿಯ ಕೆಲಸ ಮಾಡುತ್ತಿದ್ದಾರೆ. ಯಾರೂ ತೊಂದರೆ ಕೊಡುವ ಕೆಲಸವನ್ನು ಮಾಡಬಾರದು ಎಂದು ಸಲಹೆ ಮಾಡಿದರು.

By dtv

Leave a Reply

Your email address will not be published. Required fields are marked *

error: Content is protected !!