';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮೈಸೂರು: ಹತ್ತನೆ ತರಗತಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು.
ವಿದ್ಯಾರ್ಥಿನಿಯನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.