ತುಮಕೂರು: ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಂಕರಣ್ಣ(46) ಮೃತ ದುರ್ದೈವಿಯಾಗಿದ್ದು, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 25 ವರ್ಷದವಳನ್ನು ಮದ್ವೆಯಾಗಿ ವೈರಲ್ ಆಗಿದ್ದ ಶಂಕರಣ್ಣ ಆತ್ಮಹತ್ಯೆ
2021ರಲ್ಲಿ ಮದುವೆಯಾಗಿದ್ದ ಈ ದಂಪತಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದ ಮೇಘನಾಗೆ ಈ ಮುನ್ನ ಬೇರೆಯವರೊಂದಿಗೆ ಮದುವೆಯಾಗಿತಂತೆ. ಆದರೆ ಪತಿ ಎರಡು ವರ್ಷಗಳಿಂದ ಕಾಣೆಯಾಗಿದ್ದರಿಂದ ಮೇಘನಾಳೇ ಹೋಗಿ ಶಂಕರಣ್ಣ ಅವರನ್ನು ಮದುವೆಯಾಗಿದ್ದಾಳಂತೆ. ಸ್ವತಃ ಮೇಘನಾ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಳು. ಆದರೆ ಮೊದಲಿಗೆ ಮದುವೆಯಾಗಲು ಒಪ್ಪದ ಶಂಕರಣ್ಣ ಕೊನೆಗೆ ಒಪ್ಪಿಕೊಂಡು ಮೇಘನಾಳನ್ನು ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು.