dtvkannada

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಂಗಳೂರು ಮೂಲದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿ ಈ ಮುಂಚೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯಾಗಿದ್ದು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಹಸನ್ ಸಾದಿಕ್ ಯಾನೆ ಬ್ಲೇಡ್‌ ಸಾದಿಕ್‌ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಹೆಬ್ಬಾಳ ನಾಗೇನಹಳ್ಳಿ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಾಹಿತಿ‌ ಮೇರೆಗೆ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇವರಿಂದ 23 ಗ್ರಾಂ ಡ್ರಗ್ಸ್ ಹಾಗೂ ಒಂದು ರಾಯಲ್ ಎನ್ಫೀಲ್ಡ್ ಬೈಕ್ ಜಪ್ತಿ ಮಾಡಿದ್ದಾರೆ.
ಕುಖ್ಯಾತ ಆರೋಪಿಯಾಗಿರುವ ಹಸನ್ ಸಾಧಿಕ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಉಪ್ಪಿನಂಗಡಿ, ಪುತ್ತೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಕೊಲೆ ಯತ್ನ, ದೊಂಬಿ, ಅಪಹರಣ, ಕೊಲೆ ಬೆದರಿಕೆ ಸೇರಿದಂತೆ‌ 17 ಪ್ರಕರಣಗಳು ದಾಖಲಾಗಿವೆ. ಆರೋಪಿಯು ಜೀವನಕ್ಕಾಗಿ ಬೆಂಗಳೂರಿಗೆ ಮೂರು ತಿಂಗಳ ಹಿಂದಷ್ಟೇ ಬಂದು ಕಾರು ಮಾರಾಟದ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಲ್ಲದೇ, ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಸಂಪಾದನೆ ಮಾಡುವುದಕ್ಕಾಗಿ ಪರಿಚಯಸ್ಥರಿಂದ ಡ್ರಗ್ಸ್ ಖರೀದಿಸಿ, ಮಾರಾಟಕ್ಕೆ ಯತ್ನಿಸುತ್ತಿದ್ದರು. ಸದ್ಯ ಈ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಜೊತೆಗೆ ಬೆಂಗಳೂರಿನ ಬೆನ್ಸನ್ ಟೌನ್ ನಿವಾಸಿ ತಲ್ಲಾಖಾನ್‌ನನ್ನು ಬಂಧಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!