';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಯುಗಾದಿ ಸಂಭ್ರಮದಲ್ಲೂ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ.
ಇಂಧನ ಬೆಲೆಗಳು ಶನಿವಾರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ 12 ದಿನಗಳಲ್ಲಿ 10 ಬಾರಿ ಇಂಧನ ಬೆಲೆ ಏರಿಕೆ ಕಂಡಿದ್ದು, ಈವರೆಗೆ ಪ್ರತಿ ಲೀಟರ್ ಇಂಧನಗಳ ಮೇಲೆ 7.20 ರೂಪಾಯಿ ಏರಿಕೆಯಾಗಿದೆ.
ಇನ್ನು ಡೀಸೆಲ್ ಬೆಲೆಯಲ್ಲೂ 80 ಪೈಸೆ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಪೆಟ್ರೋಲ್ 84 ಪೈಸೆ, ಡೀಸೆಲ್ 78 ಪೈಸೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 85 ಪೈಸೆ ಏರಿಕೆ ಆಗಿದೆ.
ಈ ಮೂಲಕ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 117.57 ರೂಪಾಯಿ ಆಗಿದ್ದು, ಡೀಸೆಲ್ ಬೆಲೆ 85 ಪೈಸೆ ಏರಿಕೆಯಾಗಿದ್ದು, 101.79 ರೂಪಾಯಿಗೆ ತಲುಪಿದೆ.