dtvkannada

ಬೆಂಗಳೂರು: ನಿನ್ನೆಯಷ್ಟೇ ನಿವೃತ್ತಿ ಹೊಂದಿದ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ನವದೆಹಲಿಯ ದೀನ್ ದಯಾಳ್ ಉಪಾದ್ಯಾಯ ಮಾರ್ಗದಲ್ಲಿರುವ ಪಕ್ಷದ‌ ಕಚೇರಿಯಲ್ಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್​ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು.

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ರಿಂದ ಈ ಮೊದಲು ಒಪ್ಪಿಗೆ ಸಿಕ್ಕಿತ್ತು. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದರು. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿತ್ತು. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು.

By dtv

Leave a Reply

Your email address will not be published. Required fields are marked *

error: Content is protected !!