ಕೊಲಂಬೋ: ಶ್ರೀಲಂಕಾ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಿದ್ದು ಇದರ ಮಧ್ಯದಲ್ಲೇ ಶ್ರೀಲಂಕಾ ಸರ್ಕಾರದ ಸಚಿವ ಸಂಪುಟದ ಎಲ್ಲಾ ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಸುಮಾರು 26 ಸಚಿವರು ರಾಜೀನಾಮೆ ಪತ್ರ ಸಲ್ಲಿಸಿದ್ದು ತಕ್ಷಣವೇ ಜಾರಿಗೆ ಬರುವಂತೆ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಶಿಕ್ಷಣ ಸಚಿವ ದಿನೇಶ್ ಗುಣವರ್ಧನ ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ಶ್ರೀಲಂಕಾ ದೇಶವು ಆರ್ಥಿಕ ಮುಗ್ಗಟ್ಟು ಬಹಳ ಎದುರಿಸುತ್ತಿದ್ದು ನೆರೆಯ ದೇಶಗಳು ನೆರವಾಗುವಂತೆ ಶ್ರೀಲಂಕಾ ನೆರೆಯ ದೇಶಗಳಿಗೆ ಮನವಿ ಮಾಡಿಕೊಂಡಿದೆ.