ಉಪ್ಪಿನಂಗಡಿ: ಅನ್ಯ ಜಾತಿಯ ಯುವಕ ತನ್ನ ಪ್ರಿಯತಮೆಯನ್ನು ಕರೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ವ್ಯಾಪ್ತಿಯ ಗುಂಡ್ಯ ಎಂಬಲ್ಲಿ ಇಂದು ನಡೆದಿದೆ.
ಪುತ್ತೂರು ಸಂಪ್ಯ ನಿವಾಸಿ ನಝೀರ್(21) ಎಂಬಾತ ತನ್ನ ಪ್ರಿಯತಮೆಯನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿದ ಬಜರಂಗದಳ ಕಾರ್ಯಕರ್ತರು ಪ್ರೇಮಿಗಳಿಗೆ ಹಲ್ಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿ ನಝೀರ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ದೂರಿನಲ್ಲಿ ನಮಗೆ ಹಲ್ಲೆ ನಡೆಸಿದ್ದು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಹಾಗು ಜೀವಬೆದರಿಕೆ ಒಡ್ಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಬಜರಂಗದಳ ಕಾರ್ಯಕರ್ತರಾದ ಕಡಬ ತಾಲೂಕಿನ ಸಿರಿಬಾಗಿಲು ನಿವಾಸಿ ಬಾಲಚಂದ್ರ(35) ಹಾಗು ದೇರಣೆ ನಿವಾಸಿ ರಂಜಿತ್(31) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನುಳಿದ ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್ ಹಾಗೂ ಇತರರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 47/2022 ಕಲಂ 143, 147, 341, 504, 323, 324, 506, 153(a) R/w 149 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.