dtvkannada

ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ 17 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ.

ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 105.41 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 115.12 ರೂ. ಡೀಸೆಲ್ ಬೆಲೆ ಲೀಟರ್ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.86 ರೂಪಾಯಿ ದಾಖಲಾಗಿದೆ. ಹೈದರಾಬಾದ್’ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ನಿರ್ಧರಿಸಲಾಗುತ್ತದೆ. ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.

By dtv

Leave a Reply

Your email address will not be published. Required fields are marked *

error: Content is protected !!