dtvkannada

ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್‌ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಪಿವಿಎಸ್‌ ಕಡೆಯಿಂದ ಲಾಲ್‌ಭಾಗ್‌ ಕಡೆಗೆ ಅತೀ ವೇಗದಿಂದ ತೆರಳುತ್ತಿದ್ದ ಬಿಎಂಡಬ್ಲ್ಯೂ ಕಾರು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.

ಕಾರು ಹೊಡೆದ ರಭಸಕ್ಕೆ ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆ ರಸ್ತೆಗೆ ಬಿದ್ದ ಸಂದರ್ಭ ಸ್ಕೂಟಿಯ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೆ ಮಹಿಳೆಗೆ ಢಿಕ್ಕಿ ಹೊಡೆದಿದೆ.

ಎರಡೂ ಕಾರುಗಳ ನಡುವೆ ಅಪಚ್ಚಿಯಾದ ಸ್ಕೂಟಿ ಮಧ್ಯೆ ಸಿಲುಕಿದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಮಹಿಳೆಯನ್ನು ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.

ಘಟನೆಯ ನಂತರ ರೊಚ್ಚಿಗೆದ್ದ ಸಾರ್ವಜನಿಕರು ಕಾರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಮಂಗಳೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.

By dtv

Leave a Reply

Your email address will not be published. Required fields are marked *

error: Content is protected !!