ಮಂಗಳೂರು: ಯುವತಿ ಹಾಗೂ ಬಾಲಕಿಯೊಬ್ಬಳು ಸಮುದ್ರಪಾಲಾದ ಘಟನೆ ಇಂದು ಬೆಳಗ್ಗೆ ಸುರತ್ಕಲ್ ಎನ್ಐಟಿಕೆ ಬೀಚ್ ನಲ್ಲಿ ಇಂದು ಬೆಳಗ್ಗೆ ನಡೆದಿರುವುದು.
ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ.ಇವರಿಬ್ಬರು ಸೋದರ ಸಂಬಂಧಿ ಎಂದು ತಿಳಿದುಬಂದಿದೆ.
ಅಲೆಗಳ ಅಬ್ಬರಕ್ಕೆ ಸಿಲುಕಿದ ಮೂವರನ್ನು ಸ್ಥಳೀಯ ಈಜುಗಾರರು ಮತ್ತು ಸ್ಥಳದಲ್ಲಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಹೋಂ ಗಾರ್ಡ್ ಪ್ರಶಾಂತ ಮೇಲೇತ್ತಿದ್ದಾರೆ.
ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ವೈಷ್ಣವಿ ಮತ್ತು ತ್ರಿಶಾ ಸವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.