dtvkannada

ಧಾರವಾಡ: ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಓರ್ವ ಕಾರ್ಯಕರ್ತನನ್ನು ಧಾರವಾಡ ಗ್ರಾಮೀಣ ಪೊಲೀಸರು ಮಹಾಲಿಂಗ ಐಗಳಿಯನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಬಳಿ ನಿನ್ನೆ ದೌರ್ಜನ್ಯ ನಡೆದಿದ್ದು, ವ್ಯಾಪಾರಿ ನಬಿಸಾಬ್ ದೂರಿನ ಮೇರೆಗೆ ಆರೋಪಿ ಮಹಾಲಿಂಗ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಮೇಲೆ  ದುಷ್ಕರ್ಮಿಗಳು ದಾಳಿಮಾಡಿದ್ದರು. ಹಾನಿಗೀಡಾದ ಕಲ್ಲಂಗಡಿ ಹಣ್ಣಿನ ಅಂಗಡಿಕಾರ ವ್ಯಾಪಾರಿ ನಬಿಸಾಬ್‌ಗೆ ಯುವ ಕಾಂಗ್ರೆಸ್‌ನಿಂದ 25 ಸಾವಿರ ರೂ. ನೆರವು ನೀಡಲಾಗಿದೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ, ರಾಜ್ಯಾಧ್ಯಕ್ಷ ಹ್ಯಾರೀಸ್ ನಲಪಾಡ್‌ರಿಂದ ಹಣ ವಿತರಣೆ ಮಾಡಲಾಗಿದೆ. ಬಳಿಕ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ ಹೇಳಿಕೆ ನೀಡಿದ್ದು, ಮೊದಲಿಗೆ ಹಿಜಾಬ್ ಗಲಾಟೆ ಆಯ್ತು. ಅದು ಕೋರ್ಟ್‌ಗೆ ಹೋಯ್ತು. ಬಳಿಕ ಹಿಂದೂಯೇತರ ವ್ಯಾಪಾರ ವಿಷಯ ಬಂದಿದೆ. ಹಣ್ಣಿನ ವ್ಯಾಪಾರಿಗಳ ಮೇಲೆ ಬಂದಿದ್ದಾರೆ. ಮಾವು, ಕಲ್ಲಂಗಡಿ ಹಣ್ಣು ಯಾವುದೇ ಇರಲಿ ಅದು ನೇರವಾಗಿ ರೈತರ ಮೇಲೆ ಮಾಡುವ ದಾಳಿಯಾಗಿದೆ. ಸರ್ಕಾರ ಇದಕ್ಕೆಲ್ಲ‌ ಕುಮ್ಮಕ್ಕು ಕೊಡುತ್ತಿದೆ.
ಇವರ ಪಕ್ಷದ ನಾಯಕರು ಅದೇ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ನೇರವಾಗಿ ರೈತರಿಗೆ ಹೊಡೆತ ಬೀಳುತ್ತದೆ. ಇದನ್ನು ಸರ್ಕಾರ ಮತ್ತು ವಿವಾದ ಮಾಡುವವರು ಗಮನಿಸಬೇಕು ಎಂದು ಹೇಳಿದ್ದಾರೆ.

ಇದು ಹೇಯ ಮತ್ತು ಹೀನ ಕೃತ್ಯ. ಬಡ ಮು‌ಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ, ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮಸೇನೆಯವರು ಸಾಧಿಸಿದ್ದೇನು? ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ? ಶ್ರೀರಾಮಸೇನೆಯವರು ನಡೆಸಿದ ದಾಂದಲೆ ಭಯೋತ್ಪಾದನೆಗೆ ಸಮ. ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ.‌ ಶ್ರೀರಾಮಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂದಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಪ್ರಕರಣ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ದಾರವಾಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!