';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆರೋಪಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ (25), ಕುಮಾರ ಕಟ್ಟಿಮನಿ (26) ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ವ್ಯಾಪಾರ ನಡೆಸುತ್ತಿದ್ದ ನಬೀಸಾಬ್ ಗೌಸುಸಾಬ್ ಕಿಲ್ಲೇದಾರ, ಮೆಹಬೂಬ್‌ಸಾಬ್ ಮುಜಾವರ್, ಶರೀಫ್ ತಡಕೋಡ ಇವರ ಅಂಗಡಿಗಳನ್ನು ಗುಂಪು ದ್ವಂಸಗೊಳಿಸಿತ್ತು.
ಈ ಬಗ್ಗೆ ನಬೀಸಾಬ್ ಅವರಿಂದ ಹೇಳಿಕೆ ಪಡೆಯಲಾಗಿದೆ. ದಾಳಿ ನಡೆಸಿದ್ದಾರೆ ಎನ್ನಲಾದ 8 ರಿಂದ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.