ವಿಟ್ಲ: ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಮಾಣಿ ಕೊಡಾಜೆ ಸಮೀಪ ನಡೆದಿದೆ.

ಶವವು ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, 45 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿದ್ದು, ಸರ್ವಜನಿಕರ ಸಹಾಯದಿಂದ ಮೃತದೇಹವನ್ನು ತೆಗೆಯಲಾಗಿದೆ.

ವ್ಯಕ್ತಿ ಕಳೆದ 20 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿ ಕೆಟ್ಟ ವಾಸನೆ ಬಡಿಯುತ್ತಿದೆ. ಸಾರ್ವಜನಿಕರ ಸಹಾಯದಿಂದ ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿಸಿ, ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.