ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಇದೇ ಏ.18ರ ವರೆಗೆ ನಡೆಯಲಿದೆ.

ದೇವಸ್ಥಾನದ ಪರಿಸರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏ.17ರ ಬೆಳಿಗ್ಗೆ 8 ರಿಂದ ಏ.19ರ ಬೆಳಿಗ್ಗೆ 6 ಗಂಟೆಯವರೆಗೆ ಎರಡು ದಿನಗಳ ಕಾಲ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ವೈನ್ ಶಾಪ್ ಮತ್ತು ಬಾರ್‌ಗಳನ್ನು ಮತ್ತು ಎಲ್ಲಾ ವಿಧದ ಅಮಲು ಪದಾರ್ಥ ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.