ಬೆಂಗಳೂರು: ಕಾಂಟ್ರಾಕ್ಟರ್ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ಅವರ ಕುರ್ಚಿಗೆ ಕಂಟಕ ಎದುರಾಗಿದ್ದು ಇತ್ತ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ವಿಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದವು.

ಪ್ರತಿಭಟನೆಗಳು ಕೂಡ ನಡೆದಿದ್ದು ಇದರ ಬೆನ್ನಲೇ ಈಶ್ವರಪ್ಪ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದರು.
ಹೀಗರುವಾಗಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ವಿಚಾರವನ್ನು ಪ್ರಕಟಿಸಿದ್ದು ನಿನ್ನೆಯಷ್ಟೇ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಕೆಎಸ್ ಈಶ್ವರಪ್ಪ ಇಂದು ದಿಢೀರನೆ ಸುದ್ದಿಗೋಷ್ಟಿ ನಡೆಸಿ ರಾಜೀನಾಮೆ ಪ್ರಕಟಿಸಿದ್ದು ಅಚ್ಚರಿ ಮೂಡಿಸಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ ಆದರೆ ಸಿಎಂ ಪಕ್ಷದ ವರಿಷ್ಠರಿಗೆ ಮುಜುಗರ ತರಬಾರದು ಎನ್ನುವ ಉದ್ದೇಶದಿಂದ ಈ ರಾಜೀನಾಮೆ ನೀಡುತ್ತಿದ್ದೇನೆ.
ನಾಳೆಯೇ ಬೆಂಗಳೂರಿಗೆ ತೆರಳಿ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸುವುದಾಗಿ ತಿಳಿಸಿದರು.ಬೆಳಗಾವಿ ಮೂಲದ ಬಿಜೆಪಿ ಕಾರ್ಯಕರ್ತ , ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಪ್ರಕರಣದ ಸಂಬಂಧ ಉಡುಪಿ ಪೊಲೀಸ್ ಠಾಣೆಯ ಡೆತ್ ನೋಟ್ ಆಧರಿಸಿ ಸಚಿವ ಈಶ್ವರಪ್ಪ ಸಹಿತ ಇನ್ನಿಬ್ಬರ ಮೇಲೆ ಎಫ್‌ಐಆರ್ ದಾಖಲಾಗಿದ್ದು ಮೃತ ಸಂತೋಷ್ ಪಾಟೀಲ್ ಈ ಹಿಂದೆಯೇ ಈಶ್ವರಪ್ಪ ವಿರುದ್ಧ ಶೇಕಡಾ 40 ರಷ್ಟು ಭ್ರಷ್ಟಾಚಾರದ ಆರೋಪ ಹೊರಿಸಿದ್ದರು.
ಈ ನಡುವೆ ನನ್ನ ಗಂಡನ ಸಾವಿಗೆ ಈಶ್ವರಪ್ಪನೇ ಕಾರಣ ಅಂತ ಸಚಿವ ಈಶ್ವರಪ್ಪನ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಮೃತ ಗುತ್ತಿಗೆದಾರ ಸಂತೋಷ್ ಪತ್ನಿ ಜಯಶ್ರೀ ಹೇಳಿದ್ದಾರೆ.
ಈ ಬಗ್ಗೆ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ನನ್ನ ಪತಿ ಈಶ್ವರಪ್ಪನವರ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡುತ್ತಿದ್ದು ಶೇ .40 ರಷ್ಟು ಲಂಚ ಕೊಟ್ಟರೆ ಮಾತ್ರವೇ ಬಿಲ್ ಪಾಸ್ ಮಾಡುತ್ತೇನೆ ಅಂತ ಹೇಳಿದ್ದರು , ಈ ಬಗ್ಗೆ ಮಾತನಾಡಲು ಅವರ ಬಳಿ ಹೋದ್ರೆ ಅವರು ಇಂದು ನಾಳೇ ಅಂಥ ಆಟವಾಡುತ್ತಿದ್ದರು ಅಂತ ಹೇಳಿದ್ದಾರೆ.
ಇದೇ ವೇಳೇ ಸಂತೋಷ್ ಯಾರು ಎಂಬುದೇ ಗೊತ್ತಿಲ್ಲ ಎಂದಿದ್ದಾರೆ. ಯಾರು ಎಂಬುದೇ ಗೊತ್ತಿಲ್ಲ ಎಂದಾದರೆ ಫೋಟೋದಲ್ಲಿ ಹೇಗೆ ತಾನೆ ಕಾಣಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆಂದು ತಿಳಿದು ಬಂದಿದೆ.